ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಸೂಚನೆ ನೀಡಿದರು.
ಅವರು ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಯಾವುದೇ ಸಮಸ್ಯೆ ಎದುರಾಗದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು. ಗ್ರಾಮೀಣ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪಿಡಿಒಗಳು ನೋಡಿಕೊಳ್ಳಬೇಕು ಎಂದು ಹೇಳಿದರು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಯಾವುದೇ ಹಳ್ಳಿ ಜನರು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ ಎಂದರು.

ವೇದಿಕೆಯಲ್ಲಿ ಮೂರು ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಣಧಿಕಾರಿಯವರು, ತಾಲೂಕ್ ಪಂಚಾಯತಿನ ಅಧಿಕಾರಿಗಳು , ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಕರಣಿಕರು, ಹಾಗೂ ಪಂಚಾಯತ್ ಕುಡಿಯುವ ನೀರಿನ ಯೋಜನೆಯ ಸಂಬಂಧಪಟ್ಟ ಅಧಿಕಾರಿಗಳು, ಟಾಸ್ಕ್ ಫೋರ್ಸ್ ಸಂಬಂಧಪಟ್ಟ ಅಧಿಕಾರಿಗಳು, ಉಪಸ್ಥಿತರಿದ್ದರು.