Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಠಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026 ರ ಏಪ್ರಿಲ್ 15 ರಿಂದ ಮೇ 4ರ ವರೆಗೆ ಕಾಲಾವಕಾಶ ಕಲ್ಪಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version