Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳುಗೋಡು ಹಳ್ಳಿಹೊಳೆಯಲ್ಲಿ ಜರುಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಎಚ್. ಜಗದೀಶ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಜೊತೆಗೆ ಜೀವನ ಪಾಠವನ್ನು ಕಲಿಯಲು ಸಾಧ್ಯವಾಗುತ್ತದೆ ಹಾಗೂ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜೀವನದಲ್ಲಿ ಸೋಲುವುದಿಲ್ಲ, ಬದಲಾಗಿ ಇಲ್ಲಿ ಕಲಿತಿರುವ ಒಳ್ಳೆಯ ವಿಚಾರಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಮುಖ್ಯ ಅತಿಥಿಗಳಾಗಿ ಮಂಜುನಾಥ ಶೆಟ್ಟಿ, ಶ್ರೀನಿವಾಸ ಪೂಜಾರಿ, ಉಷಾಲತಾ ಶಿವರಾಮ ಪೂಜಾರಿ, ಜಯರಾಮ್ ಪೂಜಾರಿ, ಸುಬ್ರಾಯ ಕನ್ನಂತ ಕಾಲೇಜಿನ ಆಡಳಿತಾಧಿಕಾರಿ ಮೋಹನ್ ಕೆ.ಎನ್. ಉಷಾ, ಪಲ್ಲವಿ ಉಪಸ್ಥಿತರಿದ್ದರು.

ಸಹ ಶಿಬಿರಾಧಿಕಾರಿ ಮನವಿ ಕೆ.ಕೆ. ಸ್ವಾಗತಿಸಿದರು. ಎನ್.ಎಸ್.ಎಸ್. ಘಟಕದ ಅಧಿಕಾರಿಗಳಾದ ಡಾ. ರವಿಚಂದ್ರ ವಂದಿಸಿದರು. ಉಪನ್ಯಾಸಕ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Exit mobile version