ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕ- ರಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾದ ಉಡುಪಿ ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಡಾ. ವಿರೂಪಾಕ್ಷ ದೇವರಮನೆ ಮಾತನಾಡಿ, ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಮೊಬೈಲ್ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ, ಪೋಷಕರು ಮಕ್ಕಳಲ್ಲಿ ಪರೀಕ್ಷೆಯ ಕುರಿತು ಭಯ ಹುಟ್ಟಿಸುವ ಬದಲು ಅವರಲ್ಲಿ ಓದುವ ಪ್ರೀತಿ ಹುಟ್ಟಿಸಬೇಕು. ಪೋಷಕರು ಮಕ್ಕಳಿಗೆ ಮನೆಯಲ್ಲಿ ಓದುವುದಕ್ಕೆ ಉತ್ತಮ ವಾತಾವರಣವನ್ನು ಸೃಷ್ಠಿಸಬೇಕು ಎಂದು ತಿಳಿಸಿದರು.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಸುನಿತಾ ಪೂಜಾರ್ತಿ ವಂದಿಸಿದರು. ಸಹ ಶಿಕ್ಷಕಿ ಜುಲಿಯಾನ ಡಿಸೋಜಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಂಗೀತ ಶಿಕ್ಷಕಿ ರಮಣಿ ಅವರು ಪ್ರಾರ್ಥನೆಯನ್ನು ನೆರವೇರಿಸಿದರು.