Kundapra.com ಕುಂದಾಪ್ರ ಡಾಟ್ ಕಾಂ

ಎಪ್ರಿಲ್ 1ರಂದು ಮಣೂರು ಫ್ರೆಂಡ್ಸ್ ಬೆಳ್ಳಿ ಹಬ್ಬದ ಸಂಭ್ರಮ. ರಜತ ಸಂಭ್ರಮ ಫೋಸ್ಟರ್ ಬಿಡುಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಮಣೂರು ಶ್ರೀ ಹೇರಂಬ ಮಹಾಗಣಪತಿ ಹಾಗೂ  ಮಹಾಲಿಂಗೇಶ್ವರ ದೇವಸ್ಥಾನ ಇದರ ವಾರ್ಷಿಕ ರಥೋತ್ಸವದ ಹಿನ್ನಲ್ಲೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಹಮ್ಮಿಕೊಂಡು ಬರುತ್ತಿರುವ ವಾರ್ಷಿಕೋತ್ಸವಕ್ಕೆ ಇದೀಗ ರಜತ ಮಹೋತ್ಸವ ಸಂಭ್ರಮ. ಈ ದಿಸೆಯಲ್ಲಿ ಇದೇ ಬರುವ ಎಪ್ರಿಲ್ 1ರಂದು ಮಣೂರು ದೇಗುಲದ ವಠಾರದಲ್ಲಿ  ರಜತ ಸಂಭ್ರಮ ಎಂಬ ಶೀರ್ಷಿಕೆಯಡಿ ಸಾಂಸ್ಕೃತಿಕ , ಸಂಗೀತಗಾಯನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು ಇದರ ಫೋಸ್ಟರ್ ಅನ್ನು ಶುಕ್ರವಾರ ಕೋಟ ಅಮೃತೇಶ್ವರೀ ದೇಗುಲದಲ್ಲಿ ಗೀತಾನಂದ ಟ್ರಸ್ಟ್ ಪ್ರವರ್ತಕ‌ ಆನಂದ್  ಸಿ. ಕುಂದರ್ ಬಿಡುಗಡೆಗೊಳಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರ ಎಂ. ಸುಬ್ರಾಯ ಆಚಾರ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಗೌರವಾಧ್ಯಕ್ಷ ಸುರೇಶ್ ಆಚಾರ್, ಮಾಜಿ ಅಧ್ಯಕ್ಷರಾದ ಸುಧಾಕರ್ ಆಚಾರ್, ದಿನೇಶ್ ಆಚಾರ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಸುಜಾತ ಬಾಯರಿ ನಿರೂಪಿಸಿ, ವಂದಿಸಿದರು.

Exit mobile version