Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಮನೆಗೆ ನುಗ್ಗಿ 5.35 ಲಕ್ಷ ರೂ. ಮೌಲ್ಯದ ನಗದು ಕಳವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗದು ಕಳವು ಮಾಡಿರುವ ಘಟನೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾನದ ಗೆಂಡೋತ್ಸವ ಕಾರ್ಯಕ್ರಮಕ್ಕೆ ಹೆಂಡತಿ ಹಾಗೂ ಮಗಳೊಂದಿಗೆ ಮನೆಗೆ ಬೀಗ ಹಾಕಿ ಹೋಗಿದ್ದು ಪೂಜೆ ಮುಗಿಸಿ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಮುಖ್ಯ ದ್ವಾರದ ಬೀಗವನ್ನು ಕತ್ತಿಯಿಂದ ಮುರಿದು, ಒಳನುಗ್ಗಿದ ಕಳ್ಳರು, ಕೋಣೆಯ ಕಾಪಾಟಿಲ್ಲಿದ್ದ 2,35,000 ರೂ. ನಗದು ಮತ್ತು ಚಿನ್ನದ ಬ್ರಾಸ್ ಲೈಟ್ ಹಾಗೂ ಕಿವಿಯ ಬೆಂಡೋಲೆಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 5,35,000ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version