ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ರ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಇಲ್ಲಿಯ ಶಿಕ್ಷಣ ಸಂಯೋಜಕರಾದ ರಾಜಾ ಖಾರ್ವಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ.8೦ ಮತ್ತು ಶೇ.90 ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಉಪಸ್ಥಿತರಿದ್ದರು.
ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಸ್ವಾಗತಿಸಿ, ಸಹಶಿಕ್ಷಕಿ ಶುಬ್ರತಾ ನಿರೂಪಿಸಿದರು, ವಿದ್ಯಾರ್ಥಿನಿ ಶ್ರಾವಣಿ ಎಮ್. ನಾಯಕ್ ವಂದಿಸಿದಳು. ಸಂಗೀತ ಶಿಕ್ಷಕಿ ರಮಣಿಯವರು ಪ್ರಾರ್ಥನೆಗೈದರು.