ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 117ನೇ ತಿಂಗಳ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಗೊಂಬೆ ಮನೆಯಲ್ಲಿ ಆಚರಿಸಲಾಯಿತು.
ಉಪ್ಪಿನಕುದ್ರು ಗ್ರಾಮದಲ್ಲಿ ಸುಮಾರು 25 ವರ್ಷಗಳ ಕಾಲ ಆರೋಗ್ಯ ಸಹಾಯಕಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಕುಸುಮಾ ಟಿ. ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು.

ರೇವತಿ ಉಮೇಶ್ ಸುವರ್ಣ, ಶ್ರೀಕಲಾ ವಿ. ಪ್ರಭು, ವಸಂತಿ ಆರ್. ಪಂಡಿತ್, ಸುಜಾತಾ ಕೆ. ಐತಾಳ್, ಪ್ರೆಸಿಲ್ಲಾ ಮೆನೇಜಸ್, ಜಯಶ್ರೀ ಪೈ, ಕಲ್ಪನಾ ಸುರೇಶ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು.
ಯಶೋದಾ ಮತ್ತು ತಂಡದವರು ಪ್ರಾರ್ಥಿಸಿದರು. ಶೈಲಜಾ ಅವರು ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಜ್ಯೋತಿ ಪೂಜಾರಿ ಮತ್ತು ಇನ್ಫೋಸಿಸ್ ಉದ್ಯೋಗಿ ಪ್ರತೀಕ್ಷಾ ಕಾಮತ್ ಅವರು ನಿರೂಪಿಸಿದರು. ಅಂಗನವಾಡಿ ಶಿಕ್ಷಕಿ ಸಂಗೀತಾ ಅವರು ಧನ್ಯವಾದ ಸಮರ್ಪಿಸಿದರು. ನಂತರ ಉಪ್ಪಿನಕುದ್ರು ಗ್ರಾಮದ ಮಹಿಳೆಯರಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.