Kundapra.com ಕುಂದಾಪ್ರ ಡಾಟ್ ಕಾಂ

ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಅವರಿಗೆ ನುಡಿನಮನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ
: ಹಿರಿಯ ಪತ್ರಕರ್ತರಾದ ಹಾಗೂ ಪ್ರಜಾವಾಣಿ ವರದಿಗಾರರಾಗಿದ್ದ ಶೇಷಗಿರಿ ಭಟ್ ಅವರ ಅಗಲಿಕೆಯನ್ನು ಸ್ಮರಿಸಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ದಾಂಜಲಿ ಸಭೆಯು ಬುಧವಾರ ಸಾಸ್ತಾನದ ಕೋಸ್ಟಲ್ ಪ್ಯಾರಡೈಸ್ ಮಿನಿ ಸಭಾಂಗಣದಲ್ಲಿ ನಡೆಯಿತು.

ಪತ್ರಕರ್ತ ಕೆ.ಸಿ. ರಾಜೇಶ್ ಸಂಸ್ಮರಣೆ ಮಾತನಾಡಿ, ಶೇಷಗಿರಿ ಭಟ್ ಅವರು ಮಿತಭಾಷಿ, ಸರಳ ಸಜ್ಜನಿಕೆಯಿಂದ ಬಾಳಿದವರು. ಪತ್ರಿಕಾ ರಂಗದಲ್ಲಿ ಅವರ ಸೇವೆ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುಪ್ರಸಾದ್ ಶೆಟ್ಟಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ನಿರ್ದೇಶಕ ಕಮಲಾಕ್ಷ ಹೆಬ್ಬಾರ್, ಮಾಜಿ ತಾ.ಪಂ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಉಪನ್ಯಾಸಕಿ ಸವಿತಾ ಎರ್ಮಾಳ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಜಿ ಕುರ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋಮೊಹನ್, ಜಿಲ್ಲಾ ಸಂಘದ ಉಪಾಧ್ಯಕ್ಷ ಪ್ರಭಾಕರ್ ಆಚಾರ್ಯ, ತಾಲೂಕು ಗ್ಯಾರಂಟಿ ಸಮಿತಿಯ ಡಾ.ಸುನಿತಾ ಶೆಟ್ಟಿ, ಉಪನ್ಯಾಸಕರಾದ ಪ್ರಶಾಂತ್ ನೀಲಾವರ, ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗಿಳಿಯಾರು ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ್ ಗಿಳಿಯಾರು, ಆರೂರು ತಿಮ್ಮಪ್ಪ ಶೆಟ್ಟಿ ಉಪಸ್ಥಿತರಿದ್ದರು.

ಗಾಯಕ ಅಚ್ಯುತ ಪೂಜಾರಿ ಕಾರ್ಕಡ ಗಾನ ನಮನ ಸಲ್ಲಿಸಿದರು.ಬ್ರ ಹ್ಮಾವರ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version