Site icon Kundapra.com ಕುಂದಾಪ್ರ ಡಾಟ್ ಕಾಂ

ಮೂಡಿಗೆರೆಯಲ್ಲಿ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಗೆ 07 ಅಭ್ಯರ್ಥಿಗಳ ಗುರಿ ನಿಗಧಿಪಡಿಸಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, ಕೃಷಿ ಜಮೀನು ಹೊಂದಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಏಪ್ರಿಲ್ 23ರ ಪೂರ್ವಾಹ್ನ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ), ಉಡುಪಿ ರವರ ಕಛೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 27 ರಂದು ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. 

ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://horticulturedir.karnataka.gov.in ನಲ್ಲಿ ಅಥವಾ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ), ಉಡುಪಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಉಡುಪಿ ಅಥವಾ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version