Kundapra.com ಕುಂದಾಪ್ರ ಡಾಟ್ ಕಾಂ

ಮಣೂರು ಫ್ರೆಂಡ್ಸ್ ರಜತ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಕೋಟ ಮಣೂರು ಮಹಾಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಪ್ರತಿವರ್ಷ ಮಣೂರು ಫ್ರೆಂಡ್ಸ್ ಮಣೂರು ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಪರ್ವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ. ಈ ಪ್ರಯುಕ್ತ ರಜತ ಸಂಭ್ರಮ ಶೀರ್ಷಿಕೆಯಡಿ ವಿವಿಧ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುತ್ತಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮಣೂರು ಮಹಾಲಿಂಗೇಶ್ವರ ದೇಗುಲ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಗೌರವ ಸಲಹೆಗಾರ ಸುಬ್ರಾಯ ಆಚಾರ್, ಗೌರವಾಧ್ಯಕ್ಷ ಸುರೇಶ್ ಆಚಾರ್, ದೇಗುಲದ ಟ್ರಸ್ಟಿ ಅಶೋಕ್ ಶೆಟ್ಟಿ ಕೊಯ್ಕೂರು, ಸಂಘದ ಪ್ರಮುಖರಾದ ಸುಧಾಕರ ಆಚಾರ್, ದಿನೇಶ್ ಆಚಾರ್, ದೇಗುಲದ ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ವಿಷ್ಣುಮೂರ್ತಿ ಮಯ್ಯ, ಅರುಣಾಚಲ ಮಯ್ಯ, ಶಿವರಾಮ ಶೆಟ್ಟಿ, ಗೋಪಾಲ ಪೈ, ಸುರೇಶ್ ಶೆಟ್ಟಿ, ನಾಗರಾಜ್ ಅಮೀನ್ ಸೇರಿದಂತೆ ಅನೇಕ ಗಣ್ಯರು, ಮಣೂರು ಫ್ರೆಂಡ್ಸ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Exit mobile version