Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು.

ಕೊಲ್ಲೂರು ಕ್ಷೇತ್ರದ ಅಧಿದೇವತೆ ಹಾಗೂ ಗ್ರಾಮದೇವತೆ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ಊರಿನ ಹತ್ತು ಸಮಸ್ತರು, ಭಕ್ತಾದಿಗಳು ಸೇರಿ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು.

ವಾರ್ಷಿಕ ಉತ್ಸವದ ಪ್ರಯುಕ್ತ ಕಳೆದ ರಾಜ್ಯ-ಹೊರರಾಜ್ಯದ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ರಥೋತ್ಸವದ ಸಂದರ್ಭ ಸಾವಿರಾರು ಭಕ್ತರು ಪಾಲ್ಗೊಂಡು ಪುನೀತರಾದರು.

ದೇವಳದ ತಂತ್ರಿ, ವ್ಯವಸ್ಥಾಪನಾ ಸಮಿತಿ ಸದಸ್ಯ ನಿತ್ಯಾನಂದ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಸದಸ್ಯರಾದ ಧನಾಕ್ಷಿ ಪೂಜಾರಿ, ಸುರೇಂದ್ರ ಶೆಟ್ಟಿ, ಉಪ್ಪಿನಕುದ್ರು ರಾಜೇಶ್ ಕಾರಂತ, ಮಹಾಲಿಂಗ ನಾಯ್ಕ್, ಸುಧಾ ಕೆ., ಅಭಿಲಾಷ್, ರಘುರಾಮ ದೇವಾಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕೊಲ್ಲೂರು ಪೊಲೀಸರಿಂದ ಬಿಗು ಬಂದೋವಸ್ತ್‌ ಎರ್ಪಡಿಸಲಾಗಿತ್ತು.

Exit mobile version