Site icon Kundapra.com ಕುಂದಾಪ್ರ ಡಾಟ್ ಕಾಂ

ಶೆಟ್ರಕಟ್ಟೆ: ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತೆಂಗಿನ ಕಾಯಿ ಕೊಯ್ಯಲೆಂದು ಮರಕ್ಕೆ ಹತ್ತಿದ ವ್ಯಕ್ತಿಯೊಬ್ಬರು ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ರವಿವಾರ ಬೆಳಿಗ್ಗೆ ತಾಲೂಕಿನ ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆ ಎಂಬಲ್ಲಿ ಸಂಭವಿಸಿದೆ.

ಶೆಟ್ರಕಟ್ಟೆಯ ನಿವಾಸಿ ಗೋಪಾಲ (66) ಮೃತಪಟ್ಟ ವ್ಯಕ್ತಿ.

ಅವರು ಮರದಿಂದ ಬಿದ್ದು ಗಂಭೀರ ಗಾಯಗೊಂಡು ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version