Site icon Kundapra.com ಕುಂದಾಪ್ರ ಡಾಟ್ ಕಾಂ

ಕಟಪಾಡಿ ಬಳಿ ಹೆಚ್‌ಪಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ: ಅನಿಲ ಸೋರಿಕೆ ಹಿನ್ನಲೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ, ಮಾ.16:
ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್‌ ಟ್ಯಾಂಕ‌ರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು ಪರಿಣಾಮವಾಗಿ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆಯಾಗುತ್ತಿರುವ ಹಿನ್ನೆಲೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ.

ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ರಸ್ತೆಯಲ್ಲಿ ಸಂಚರಿಸುವಂತೆ ತಿಳಿಸಿದ್ದಾರೆ.

ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ ಮೂಡುಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗಬೇಕು ಅಥವಾ ಪಡುಬಿದ್ರೆ – ಬೆಳ್ಳಣ್ – ಶಿರ್ವಾ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪಬೇಕು.

ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ – ಮೂಡುಬೆಳ್ಳೆ- ಶಿರ್ವಾ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳಬೇಕು ಅಥವಾ ಮಣಿಪಾಲದಿಂದ ಶಿರ್ವಾ – ಬೆಳ್ಳಣ್ ಮಾರ್ಗವಾಗಿ ಪಡುಬಿದ್ರಿ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸಬೇಕು.

Exit mobile version