ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

