Site icon Kundapra.com ಕುಂದಾಪ್ರ ಡಾಟ್ ಕಾಂ

ರೈಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಹಳಿಗೆ ಬಿದ್ದ ಬಾಲಕ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರೈಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಹಳಿಗೆ ಬಿದ್ದ ಜಾರ್ಖಂಡ್ ಮೂಲದ ಹುಡುಗ ಸಾವನ್ನಪ್ಪಿದ ಘಟನೆ ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ಎಂಬಲ್ಲಿ ಇತ್ತೀಚಿಗೆ ಸಂಭವಿಸಿದೆ.

ಜಾರ್ಖಂಡ್ ಮೂಲದ ರಂಗ ಬಾಜ್ ಅನ್ಸಾರಿ (16) ಸಾವನ್ನಪ್ಪಿರುವುದಾಗಿ ಆ ವ್ಯಕ್ತಿಯ ಕಿಸೆಯಲ್ಲಿದ್ದ ದಾಖಲೆಗಳಿಂದ ತಿಳಿದು ಬಂದಿದೆ.

ಈತ ಜಾರ್ಖಂಡ್ ನಿಂದ ಮಂಗಳೂರಿಗೆ ಹೋಗುವ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಕುಂದಬಾರಂದಾಡಿ ಗ್ರಾಮದ ಚಕ್ರ ಸೇತುವೆಯ ಮೇಲೆ ಹಾದು ಹೋಗಿರುವ ತೊರೊಳ್ಳಿ ಎಂಬಲ್ಲಿರುವ ರೈಲು ಹಳಿಯಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯ ಮಧ್ಯದ ಅವಧಿಯಲ್ಲಿ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version