Site icon Kundapra.com ಕುಂದಾಪ್ರ ಡಾಟ್ ಕಾಂ

ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಒಬ್ಬಂಟಿಯಾಗಿ ವಾಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಸಾಲಿಮಕ್ಕಿಯಲ್ಲಿ ಸಂಭವಿಸಿದೆ.

ಉಪ್ಪುಂದ ನಿವಾಸಿ ಕೃಷ್ಣ ಗಾಣಿಗ (67) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಸಂಶಯಿಸಲಾಗಿದೆ. ಅವರ ಪತ್ನಿ, ಮಕ್ಕಳು ಉಡುಪಿಯಲ್ಲಿ ನೆಲೆಸಿದ್ದರು.

 ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version