Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಕಾಲೇಜಿನಲ್ಲಿ ಕಾವಿ ಕಲೆಯ ಕುರಿತು ಪರಿಚಯ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ನಡೂರಿನ ಶ್ರೀವಾಣಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಾತಕೋತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ರಾಷ್ಟ್ರೀಯ ಸೇವಾ ಯೋಜನೆ ಇದರ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಾವಿ ಕಲೆಯ ಕುರಿತು ಪರಿಚಯ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಕಲಾವಿದರಾದ ಜನಾರ್ದನ ಹಾವಂಜೆ ಅವರು ಈ ಕಲೆಯ ವಿಶಿಷ್ಟತೆ, ಇತಿಹಾಸ ಮತ್ತು ಸಮಕಾಲೀನ ಸಂದರ್ಭದಲ್ಲಿ ಅದರ ಸಂರಕ್ಷಣೆಯ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.

ಪಾರಂಪರಿಕವಾದ ಈ ಕಲೆಯ ಕುರಿತು ಅಧ್ಯಯನ ಮತ್ತು ಸಂಶೋಧನೆ ನಡೆಸಿರುವ ಜನಾರ್ದನ ಹಾವಂಜೆ ಅವರು ಚಿತ್ರಕಲೆಯ ವಿವಿಧ ಪ್ರಕಾರಗಳಲ್ಲಿ ಕಾವಿ ಕಲೆಯ ವೈಶಿಷ್ಟ್ಯ ಮತ್ತು ವಿಭಿನ್ನತೆಯ ಕುರಿತು ಮಾತನಾಡಿದರು.

ಕಲೆಯ ಕುರಿತಾದ ಆಸಕ್ತಿಗಳನ್ನು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಸೌಂದರ್ಯ ಪ್ರಜ್ಞೆ, ನಾಗರಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಸಹಕಾರಿ ಆಗಬಲ್ಲದು ಎಂದರು. ಲಲಿತ ಕಲೆಗಳ ಕ್ಷೇತ್ರದಲ್ಲಿ  ಲಭ್ಯವಿರುವ ಉದ್ಯೋಗಾವಕಾಶಗಳ ಸಾಧ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ. ಉದಯ್ ಶೆಟ್ಟಿ ಮತ್ತು ಶಿಬಿರಾಧಿಕಾರಿಗಳಾದ ನಿರಂಜನ ಶರ್ಮ, ಶ್ರುತಿ ಆಚಾರ್ಯ, ರಂಜಿತ್‌ ಹಾಗೂ ಘಟಕ ನಾಯಕರು ಉಪಸ್ಥಿತರಿದ್ದರು.

Exit mobile version