Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಮಂಗಳವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜ್ಞಾನಸುಧಾ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಕಷ್ಟ ಅಂಥ ಯಾವುದು ಇಲ್ಲ ಅದು ನಾವು ನೋಡುವ ದೃಷ್ಟಿಕೋನದಲ್ಲಿದೆ. ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟು ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉಜ್ವಲ ಭವಿಷ್ಯವನ್ನು ಹೊಂದಲು ನಾಂದಿಯಾಗುತ್ತದೆ ಎಂದರು.

ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತಂದೆ, ತಾಯಿ, ಗುರುಗಳಿಗೆ ಗೌರವ ನೀಡಿ ಸಮಾಜದಲ್ಲಿ ಸತ್ಪ್ರಜೆಯಾಗಿ ಯಶಸ್ವಿ ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾ‌ರ್, ಶ್ರೀ ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣ್‌ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನೆರವೇರಿತು. ಕಾಲೇಜಿನ ಉಪನ್ಯಾಸಕರು ತಮ್ಮ ಹಿತನುಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಿದ ಕರಾಟೆ ಪಟು ವಿದ್ಯಾರ್ಥಿ ಅಕ್ಷಯ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ವಿದ್ಯಾರ್ಥಿನಿ ಸುರಕ್ಷಾ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಆಯಿಷಾ ಅಕ್ಸಾ ಸ್ವಾಗತಿಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಂಜುಶ್ರೀ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿನಿ ಮಾನ್ಯ ವಂದಿಸಿದರು.

Exit mobile version