Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಸಾಲ ಸಿಗದಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕಿನಿಂದ ಸಾಲ ಸಿಗದಿದ್ದಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳೂರಿನಲ್ಲಿ ಸಂಭವಿಸಿದೆ.

ಬಳ್ಳೂರು ಗ್ರಾಮದ ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ.

ಭರತ್ ಅವರು ತಮ್ಮ 10 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕ್ ಗೆ ಸಾಲಕ್ಕಾಗ ಅರ್ಜಿ ಸಲ್ಲಿಸಿದ್ದರು. ಆದರೆ ಬ್ಯಾಂಕ್ ನವರು ಜಾಗದ ಮೇಲೆ ಸಾಲ ಕೊಡಲು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡ ಭರತ್ ಮಾ.12 ರಂದು ಮಧ್ಯಾಹ್ನ ಮನೆಯಲ್ಲಿ ಕಳೆ ನಾಶಕ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದರು.

ಇದರಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ. 16 ರಂದು ಅಲ್ಲಿಂದ ಬಿಡುಗಡೆಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version