Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಮಾಹಿತಿ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಬುಧವಾರ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಂಟಿ ಸಮಿತಿ ಅಧ್ಯಕ್ಷರು ಮೋಹನ್ ಪೂಜಾರಿ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿದಿ ಬಗ್ಗೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಜನೆಯ ಮಾಹಿತಿ ಹಾಗು ಅದರ ಸದುಪಯೋಗವನ್ನು ವಿಸ್ತಾರವಾಗಿ ತಿಳಿಸಿದರು. ಪದವಿ ನಂತರ ಯೋಜನೆಯಲ್ಲಿ ಅಹ೯ ಅಭ್ಯರ್ಥಿಗಳು ನೋಂದಣಿಯಾಗುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅಧ್ಯಕ್ಷರು ಮೋಹನ್ ಪೂಜಾರಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂಧಿ ಪೃಥ್ವಿರಾಜ್ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಬೈಂದೂರು ಗ್ಯಾರಂಟಿ ಸಮಿತಿ ಸದಸ್ಯರಾದ ಮಾಲತಿ, ಸೂರ್ಯಕಾಂತಿ ನಾಗೇಶ್, ರಾಮಚಂದ್ರ ಖಾರ್ವಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಉಪನ್ಯಾಸಕಿ ಸುಚಿತ್ರ ಸ್ವಾಗತಿಸಿ, ವಂದಿಸಿದರು.

Exit mobile version