ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್‌ನ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಘಟಕದ ಮುಖ್ಯಸ್ಥೆ ಭವ್ಯ ಇವರೊಂದಿಗೆ ಕಸ ವಿಲೇವಾರಿ ಹಾಗೂ ವಿಂಗಡನಾ ಕ್ರಮಗಳ ಕುರಿತು ಚರ್ಚಿಸಿ ಅಲ್ಲಿನ ಸಿಬ್ಬಂದಿಗಳ ಕಾರ್ಯವೈಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಪಂಚಾಯತ್ ಆಡಳಿತಾಧಿಕಾರಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸದಸ್ಯರು, ಸಂಸದರ ಆಪ್ತ ಕಾರ್ಯದರ್ಶಿ ಹರೀಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.