Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 39ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಮಕ್ಕಳು ಬೆಳೆಯುತ್ತಿದ್ದ ಹಾಗೆ ಭಾವನಾತ್ಮಕ ಸಂಬಂಧಗಳಿಂದ ದೂರವಾಗುತ್ತಾ ಹೋಗುತ್ತಾರೆ. ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಅನೇಕ ಶಾಲೆಗಳು ಬಹಳಷ್ಟು ಪ್ರಚಾರ ಮಾಡುತ್ತಿದ್ದು, ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತೇವೆ. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸಿ ಈ ದೇಶಕ್ಕೆ ನೀಡುವ ಶಿಕ್ಷಣ ಶಾಲೆಗಳಲ್ಲಿ ನೀಡುತ್ತೇವೆ ಎಂದು ಯಾವುದೇ ಶಾಲೆಗಳು ಪ್ರಚಾರ ಮಾಡುತ್ತಿಲ್ಲ. ಆದರೆ ಶಿಶು ಮಂದಿರದಲ್ಲಿ ಮಕ್ಕಳಿಗೆ ಬಾಲ್ಯದಲ್ಲಿ ನೀಡಬೇಕಾದ ಸಂಸ್ಕೃತಿ, ಸಂಸ್ಕಾರದ ಶಿಕ್ಷಣವನ್ನು ನೀಡುವ ಮೂಲಕ, ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಬೆಳೆಸುತ್ತಿದೆ ಎಂದು ಉಡುಪಿ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಿಬ್ಬಂದಿ ನಾಗರಾಜ ಖಾರ್ವಿ ಹೇಳಿದರು.

ಅವರು ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಭವನದಲ್ಲಿ ಶನಿವಾರ ಜರಗಿದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ 39ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ನಿರ್ವಾಹಕ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ ಬೌದ್ಧಿಕ್ ನೀಡಿದರು. ಗಂಗೊಳ್ಳಿ ಸ.ವಿ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ದೀಪಾ ನಾಗರಾಜ ಖಾರ್ವಿ ಬಹುಮಾನ ವಿತರಿಸಿದರು. ಶಿಶು ಮಂದಿರದ ಸದಸ್ಯರಾದ ಸವಿತಾ ಯು.ದೇವಾಡಿಗ, ಶ್ರೀನಿವಾಸ ಎಂ., ಉಷಾ ಪಿ.ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಸಹಾಯಕಿ ನಾಗರತ್ನ ಉಪಸ್ಥಿತರಿದ್ದರು.

ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಸ್ವಾಗತಿಸಿದರು. ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾತಾಜಿ ಪ್ರೇಮಾ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು.

Exit mobile version