Kundapra.com ಕುಂದಾಪ್ರ ಡಾಟ್ ಕಾಂ

ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ವಿಧಾನಸೌಧದಲ್ಲಿ ಉಡುಪಿ ಜಿಲ್ಲೆಯ ಐದು ಶಾಸಕರಿಗೆ ಮನವಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬೆಂಗಳೂರು ವಿಧಾನಸೌಧದಲ್ಲಿ ಉಡುಪಿ ಜಿಲ್ಲೆಯ ಮಾನ್ಯ ಶಾಸಕರಾದ ಸುನೀಲ್ ಕುಮಾರ್ (ಕಾರ್ಕಳ), ಗುರುರಾಜ್ ಗಂಟಿಹೊಳೆ (ಬೈಂದೂರು), ಯಶಪಾಲ್ ಆನಂದ್ ಸುವರ್ಣ (ಉಡುಪಿ), ಕಿರಣ್ ಕುಮಾರ್ ಕೊಡ್ಗಿ (ಕುಂದಾಪುರ) ಹಾಗೂ ಗುರ್ಮೆ ಸುರೇಶ್ ಶೆಟ್ಟಿ (ಕಾಪು) ಅವರನ್ನು ಭೇಟಿ ಮಾಡಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಯನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗುತ್ತಿಗೆದಾರರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟ, ನಡೆಯುತ್ತಿರುವ ಕಾಮಗಾರಿಗಳಿಗೆ ಉಂಟಾಗಿರುವ ಅಡಚಣೆಗಳು ಹಾಗೂ ಬಾಕಿ ಬಿಲ್‌ಗಳ ವಿಳಂಬದಿಂದ ನಿರ್ಮಾಣ ಕ್ಷೇತ್ರದ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಬಗ್ಗೆ ಶಾಸಕರಿಗೆ ವಿವರವಾಗಿ ಮನವರಿಕೆ ಮಾಡಿಕೊಡಲಾಯಿತು.

ಮನವಿ ಪತ್ರವನ್ನು ಸ್ವೀಕರಿಸಿದ ಶಾಸಕರು ಗುತ್ತಿಗೆದಾರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಸಂಬಂಧಿತ ಅಧಿಕಾರಿಗಳು ಮತ್ತು ಸರ್ಕಾರದ ಮಟ್ಟದಲ್ಲಿ ವಿಷಯವನ್ನು ಗಂಭೀರವಾಗಿ ಮುಂದಿಟ್ಟು ಬಾಕಿ ಬಿಲ್ ಬಿಡುಗಡೆಗೆ ತ್ವರಿತ ಕ್ರಮ ಕೈಗೊಳ್ಳಲು ಸದನದಲ್ಲಿಯೂ ಧ್ವನಿ ಎತ್ತಿ ಸಂಪೂರ್ಣವಾಗಿ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಜಿ. ಗೋಕುಲ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಎ.ಬಿ.ಶೆಟ್ಟಿ, ಪ್ರಮೋದ್ ಶೆಟ್ಟಿ, ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ , ಸಲಹೆಗಾರರಾದ ಪವನ್ ಎಸ್.ಡಿ. ಹಾಗೂ ಹಿರಿಯ ಗುತ್ತಿಗೆದಾರರಾದ ಫಿಲಿಪ್ ಡಿ’ಕೋಸ್ಟಾ, ಗಣೇಶ್ ಪುತ್ರನ್, ಸುನಿಲ್ ಶೆಟ್ಟಿ ಹೇರಿಕುದ್ರು, ಗ್ರೇಸನ್ ಪಾಯಸ್, ಸುಮಿತ್ ಹೆಗ್ಡೆ, ಅಜಿತ್ ಶೆಟ್ಟಿ, ದೀಪಕ್ ಶೆಟ್ಟಿ ಹಾಲಾಡಿ, ಗಣೇಶ್ ಶೆಟ್ಟಿ ಬಿದ್ಕಲ್ಕಟ್ಟೆ,ಸಂತೋಷ್ ಶೆಟ್ಟಿ ಗೋಳಿಯಂಗಡಿ ಸೇರಿದಂತೆ ಹಲವು ಹಿರಿಯ ಕಿರಿಯ ಗುತ್ತಿಗೆದಾರರು ಉಪಸ್ಥಿತರಿದ್ದರು.

ಗುತ್ತಿಗೆದಾರರ ಸಮಸ್ಯೆಗಳ ಪರಿಹಾರದ ದಿಕ್ಕಿನಲ್ಲಿಈ ಭೇಟಿ ಮಹತ್ವದ ಹೆಜ್ಜೆಯಾಗಿದ್ದು, ಬಾಕಿ ಬಿಲ್ ಪಾವತಿ ಪ್ರಕ್ರಿಯೆ ಶೀಘ್ರಗತಿಯಲ್ಲಿ ಸಾಗಲಿದೆ ಎಂಬ ವಿಶ್ವಾಸ ಗುತ್ತಿಗೆದಾರರಲ್ಲಿ ವ್ಯಕ್ತವಾಗಿದೆ.

Exit mobile version