Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು, 10 ವರ್ಷಗಳ ನಂತರ ಇತ್ತೀಚೆಗಷ್ಟೇ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ ಸಿದ್ದಾಪುರ ಗ್ರಾಮದ ಅಕ್ಕುಂಜೆಯ ಶಶಿಕಾಂತ್ ಶೆಟ್ಟಿ (44) ವಿರುದ್ಧದ ಆರೋಪ ಸಾಬೀತಾಗಿದೆ.

ವರದಕ್ಷಿಣೆ ಕಿರುಕುಳಕ್ಕಾಗಿ ಆತನಿಗೆ ಕುಂದಾಪುರ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ, ಆದೇಶಿಸಿದೆ.

ತಲೆಮರೆಸಿಕೊಂಡಿದ್ದ ಈತನನ್ನು ಮಾ.1 ರಂದು ಪಶ್ಚಿಮ ಬಂಗಾಳದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಪತ್ನಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:
ಕುಂದಾಪುರ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
https://kundapraa.com/?p=96365 .

Exit mobile version