Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂಭಾಶಿ: ರಾ.ಹೆ. ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ, ಚಾಲಕನ ಸ್ಥಿತಿ ಗಂಭೀರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

ಉಡುಪಿಯಿಂದ ಕುಂದಾಪುರ ಕಡೆಗೆ ಶಿಲೆಕಲ್ಲು ಜಲ್ಲಿ ಸಾಗಿಸುತ್ತಿದ್ದ ಲಾರಿ, ಕುಂಭಾಶಿ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬಂದ ಲಾರಿ ಡಿವೈಡರ್ ಏರಿ ರಸ್ತೆಯ ವಿರುದ್ಧ ದಿಕ್ಕಿಗೆ ಚಲಿಸಿ ಕೊನೆಗೆ ರಸ್ತೆ ಪಕ್ಕದ ಹೊಂಡಗೆ ಬಿದ್ದಿದೆ.

ಅಪಘಾತದ ತೀವ್ರತೆಗೆ ಲಾರಿ ಚಾಲಕನ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಲಾರಿಯ ಟಯರ್ ಸಿಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನು ಲಾರಿ ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿದ ಸಂದರ್ಭದಲ್ಲಿ ಎದುರಿನಿಂದ ಯಾವುದೇ ವಾಹನಗಳು ಬಾರದ ಕಾರಣ ದೊಡ್ಡ ಅಪಘಾತ ತಪ್ಪಿದಂತಾಗಿದೆ.

Exit mobile version