ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಗುರುವಾರದಂದು ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಬಿವೇರ್ ಆಫ್ ಪ್ಲಾಸ್ಟಿಕ್ ಅಸುರ ಎಂಬ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಬೇರೂ ಕಲೆಕ್ಟಿವ್ ಸಂಯೋಜಕರಾದ ಕ್ಲೈವ್ ಕ್ರಾಸ್ಟಾ ತಮ್ಮ ತಂಡದವರಿಂದ ವಿದ್ಯಾರ್ಥಿಗಳಿಗೆ ಯಕ್ಷಗಾನ ರೂಪದಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಅದರಿಂದ ಆಗುವ ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಎನ್.ಎಸ್. ಎಸ್ ಘಟಕದ ಸಂಯೋಜಕರು ಬೋಧಕ ಬೋಧಕೇತರ ಸಿಬ್ಬಂಧಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.