ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಂಗಳೂರಿನಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಹಕ್ಲಾಡಿಯ ನಿವಾಸಿ ರವೀಂದ್ರ (41) ಅವರು ಹಕ್ಲಾಡಿ ಸಮೀಪ ಚಕ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾ. 25ರ ಬೆಳಗ್ಗೆ ಮನೆಯಿಂದ ಅಂಗಡಿಗೆ ಹೋಗಿ ಬರುವುದಾಗಿ ಹೊರಟವರು ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ತಂದೆ ಶ್ರೀಧರ ಚಂದನ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು, ಶುಕ್ರವಾರ ಸಂಜೆ ಅವರ ಶವ ಚಕ್ರಾ ನದಿಯಲ್ಲಿ ಪತ್ತೆಯಾಗಿದೆ.

