Site icon Kundapra.com ಕುಂದಾಪ್ರ ಡಾಟ್ ಕಾಂ

ಮಣೂರು ಪಡುಕರೆ ಸ.ಹಿ.ಪ್ರಾ. ಶಾಲೆಯ ಕಿಂಡರ್‌ ಗಾರ್ಟನ್‌  ವಿಭಾಗದಲ್ಲಿ ವಾರ್ಷಿಕ ಪದವಿ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಮಣೂರು ಪಡುಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಲ್ಲಿ ವಾರ್ಷಿಕ ಪದವಿ ಪ್ರದಾನ ಸಮಾರಂಭ ಇತ್ತೀಚಿಗೆ  ನೆರವೇರಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗೀತಾನಂದ ಫೌಂಡೇಶನ್‌ನ ಪ್ರವರ್ತಕರಾದ ಆನಂದ ಸಿ. ಕುಂದರ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಜೀವನದಲ್ಲಿ ಶಿಸ್ತಿನೊಂದಿಗೆ ಶಿಕ್ಷಣದ ಮಹತ್ವವನ್ನು ವಿವರಿಸಿದರು.

ಮುಖ್ಯ ಭಾಷಣಕಾರರಾಗಿ ವಿವೇಕ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲರಾದ ಪ್ರೀತಿ ರೇಖಾ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಉತ್ಸಾಹಭರಿತ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕ ವಿವೇಕಾನಂದ ಗಾವಂಕಾರ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಜ್ಯೋತಿ, ವಾಹಿನಿ ಯುವಕ ಸಂಘದ ರಮೇಶ್ ಕುಂದರ್, ಎಸ್‌ಡಿಎಂಸಿ ಅಧ್ಯಕ್ಷ ವಿನಯ್, ಮಾಜಿ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್, ಪಂಚಾಯತ್ ಮಾಜಿ ಸದಸ್ಯ ಜಯರಾಮ ಶೆಟ್ಟಿ ಹಾಗೂ ಗಿತಾನಂದ ಫೌಂಡೇಶನ್‌ನ ವೈಷ್ಣವಿ ರಕ್ಷಿತ್ ಕುಂದರ್ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಗೌರವಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

Exit mobile version