ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಮಾಬುಕಳದಲ್ಲಿ ಟ್ರಕ್ ಡಿಕ್ಕಿಯಾಗಿ ಸ್ಕೂಟಿ ಸವಾರೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಉಪ್ಪಿನಕೋಟೆ ಸಾಲಿಕೇರಿ ನಿವಾಸಿ ನಿರ್ಮಲಾ (54) ಮೃತ ಮಹಿಳೆ.
ಅವರು ತನ್ನ ಪುತ್ರಿ ನಿರೀಕ್ಷಾ ಅವರೊಂದಿಗೆ ಸಾಲಿಗ್ರಾಮದ ಆಂಜನೇಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾಬುಕಳ ಸೇತುವೆ ಬಳಿ ಬ್ರಹ್ಮಾವರದಿಂದ ಕೋಟ ಕಡೆ ಸಂಚರಿಸುತ್ತಿದ್ದ ತೆಲಂಗಾಣ ನೋಂದಣಿಯ ಟ್ರಕ್ ಡಿಕ್ಕಿ ಹೊಡೆಯಿತು. ಢಿಕ್ಕಿಯ ರಭಸಕ್ಕೆ ನಿರ್ಮಲಾ ಅವರು ಸ್ಥಳದಲ್ಲೇ ಮೃತಪಟ್ಟರು, ನಿರೀಕ್ಷಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

