Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ‘ಪ್ಲಾಸ್ಟಿಕಾಸುರʼ ಯಕ್ಷಗಾನ ಪ್ರಸ್ತುತಿ

ಕುಂದಾಪರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು BAERU ಕಲೇಕ್ಟಿವ್ಸ್, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪ್ಲಾಸ್ಟಿಕ್ ಬಳಕೆಯ ಅರಿವಿನ ಕುರಿತಾದ ‘ಪ್ಲಾಸ್ಟಿಕಾಸುರ’ ಯಕ್ಷಗಾನ ಪ್ರಸ್ತುತಿ ನಡೆಯಿತು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿದರು.

Exit mobile version