Site icon Kundapra.com ಕುಂದಾಪ್ರ ಡಾಟ್ ಕಾಂ

‌ಸಾಹೇಬರಕಟ್ಟೆ ಮಟ್ಕಾ ಜುಗಾರಿ ಅಡ್ಡೆಗೆ  ಪೊಲೀಸರ ದಾಳಿ – ಓರ್ವ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬ್ರಹ್ಮಾವರ:
ಶಿರಿಯಾರ ಗ್ರಾಮದ ಸಾಹೇಬರಕಟ್ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಸೋಮವಾರ ನಡೆದಿದೆ.

ಸಾಹೇಬರ ಕಟ್ಟೆಯ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ಮಟ್ಕಾ ಜುಗಾರಿ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭ ಮಟ್ಕಾ ಚೀಟಿ ಬರೆಯುತ್ತಿದ್ದ ನಿರಂಜನ ಎನ್ನುವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆರೋಪಿಯು ರಘು ಹೆಸ್ಕುತ್ತೂರು ಅವರ ಬಳಿ ಕಮಿಷನ್ ಗಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ.

ಆರೋಪಿ ನಿರಂಜನ ಹಾಗೂ ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಬಾಲ್ ಪೆನ್, ಮಟ್ಕಾ ಚೀಟಿ ನಗದು 1165/- ರೂಪಾಯಿಯನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version