ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ದಿನಗಳಲ್ಲಿ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು, ಮಕ್ಕಳಿಗೆ ಬಾಲ್ಯದಲ್ಲಿ ದೊರೆಯಬೇಕಾದ ಶಿಕ್ಷಣ ಸಿಗುತ್ತಿಲ್ಲ. ಈ ಕಾರಣದಿಂದ ಮಕ್ಕಳು ದಾರಿ ತಪ್ಪುತ್ತಿದ್ದು, ದುಶ್ಚಟ, ಭ್ರಷ್ಟಾಚಾರ, ಭಯೋತ್ಪಾದನೆ ಮೊದಲಾದ ಚಟುವಟಿಕೆಗಳತ್ತ ಗಮನ ಹರಿಸುತ್ತಿದ್ದಾರೆ. ಮಕ್ಕಳ ಮೂಲಕ ಮನೆ ಮಂದಿಗೆ ಶಿಕ್ಷಣ ದೊರೆತು ಮನೆ, ಕೇರಿ, ಊರು ಬೆಳಗಬೇಕೆಂಬ ಉದ್ದೇಶದಿಂದ ಶಿಶು ಮಂದಿರಗಳಲ್ಲಿ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳನ್ನು ತಿಳಿಸುವ ಶಿಕ್ಷಣ ನೀಡಲಾಗುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ಕಾರ್ಯನಿರ್ವಾಹಕ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.
ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಮಂಗಳವಾರ 2025-26ನೇ ಸಾಲಿನ ಪಾಲಕರ ಮಿಲನ ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಸಂವಾದ ನಡೆಸುತ್ತಾ ಮಾತನಾಡಿದರು.
ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥ ಕಾರ್ಯದರ್ಶಿ ಚಂದ್ರಿಕಾ ಧನ್ಯ, ವಿಶ್ವಸ್ಥರಾದ ಕಲ್ಪನಾ ಭಾಸ್ಕರ, ಶಿಶು ಮಂದಿರದ ಕಾರ್ಯದರ್ಶಿ ಅಶ್ವಿತಾ ಜಿ.ಪೈ, ಸದಸ್ಯರಾದ ಸವಿತಾ ಯು.ದೇವಾಡಿಗ, ಬಿ.ಲಕ್ಷ್ಮೀಕಾಂತ ಮಡಿವಾಳ, ಭಾಸ್ಕರ ಎಚ್.ಜಿ., ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಮಾತಾಜಿ ಪ್ರೇಮಾ, ಸಹಾಯಕಿ ನಾಗರತ್ನ ಮೊದಲಾದವರು ಉಪಸ್ಥಿತರಿದ್ದರು.
ಸಹ ಶಿಕ್ಷಕಿಯರಾದ ಸವಿತಾ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಂಚಾಲಕ ಡಾ. ಕಾಶೀನಾಥ ಪೈ ಪ್ರಸ್ತಾವಿಕ ಮಾತುಗಳನ್ನಾಡಿದರು. ದಿವ್ಯಶ್ರೀ ಖಾರ್ವಿ ವಂದಿಸಿದರು.

