Site icon Kundapra.com ಕುಂದಾಪ್ರ ಡಾಟ್ ಕಾಂ

ಡಿಪ್ಲೋಮಾ ಕೋರ್ಸುಗಳಿಗೆ ಲ್ಯಾಟರಲ್‌ ಎಂಟ್ರಿ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ಲಾಸ್ಟಿಕ್ಸ್ ಮೋಲ್ಡ್ ಟೆಕ್ನಾಲಜಿ ಡಿಪ್ಲೋಮಾ ಹಾಗೂ ಪ್ಲಾಸ್ಟಿಕ್ಸ್ ಟೆಕ್ನಾಲಜಿ ಡಿಪ್ಲೋಮಾ ಕೋರ್ಸುಗಳಿಗೆ ಲ್ಯಾಟರಲ್ ಎಂಟ್ರಿ (ನೇರ ದ್ವಿತೀಯ ವರ್ಷ) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ (ವಿಜ್ಞಾನ) ಅಥವಾ ಐ.ಟಿ.ಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಲ್ಲದೆ, ವೃತ್ತಿಪರ ಡಿಪ್ಲೋಮಾ ಕೋರ್ಸ್ಗಳಲ್ಲಿ ಪ್ರವೇಶ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗೂ ಅಂತಿಮ ಸೆಮಿಸ್ಟರ್‌ನಲ್ಲಿ ಕ್ಯಾಂಪಸ್ ಆಯ್ಕೆ ಮೂಲಕ ಉದ್ಯೋಗಾವಕಾಶವನ್ನು ಖಚಿತಪಡಿಸಲಾಗುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ಪ್ರವೇಶ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cipet.gov.in ಅಥವಾ ಮೊ.ನಂ:  9480253024, 9791431827 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version