Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಪತ್ರಕರ್ತ ಪ್ರಶಾಂತ್ ಪಾದೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ)ವು 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿಗೆ ಕುಂದಾಪುರ ಉದಯವಾಣಿ ವರದಿಗಾರರಾದ ಪ್ರಶಾಂತ್ ಪಾದೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಜನ-ಜೀವನದ ವರದಿಯನ್ನು ಆಧರಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸುಳ್ಯ ತಾಲೂಕಿನ ಪಾದೆ ಗ್ರಾಮದವರಾದ ಪ್ರಶಾಂತ್‌ ಅವರು ಪತ್ರಿಕೋದ್ಯಮ ಪದವೀಧರಾಗಿ ವೃತ್ತಿ ಬದುಕಿನಲ್ಲಿ ತೊಡಗಿಕೊಂಡಿದ್ದಾರೆ. ಏಪ್ರಿಲ್ 11 ಮತ್ತು 12ರಂದು ಬೀದರ್‌ನಲ್ಲಿ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version