ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಯೋಜನಾ ಸಂಯೋಜಕ-1 (ಯಾವುದೇ ಸ್ನಾತಕ್ಕೋತ್ತರ ಪದವಿ) ಹಾಗೂ ಆಪ್ತ ಸಮಾಲೋಚಕ-3 (ಎಂ.ಎಸ್.ಡಬ್ಲೂ) ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎಪ್ರಿಲ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬನ್ನಂಜೆ ದೂ.ಸಂ;0820-2526394 ಇಲ್ಲಿ ಖುದ್ದಾಗಿ ಅಥವಾ ಇ-ಮೇಲ್ udupis1090@gmail.com ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಪ್ರಕಟಣೆ ತಿಳಿಸಿದೆ.

