Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಕ್‌ಗೆ ಮಿನಿಲಾರಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು:
ಹಾಲ್ಕಲ್ ಪೆಟ್ರೋಲ್ ಬಂಕ್ ಬಳಿ ಬೈಕ್‌ಗೆ ಮಿನಿಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಸವಾರ ಸಹಿತ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹುಲ್ಲು ಕತ್ತರಿಸುವ ಕೆಲಸ ಮಾಡುವ ಮುದೂರು ನಿವಾಸಿ ಗಣೇಶ ಅವರು ಸ್ನೇಹಿತ ಸತೀಶ್ ಜತೆ ಬೈಕ್ ನಲ್ಲಿ ಹಾಲ್ಕಲ್ ಪೆಟ್ರೋಲ್ ಬಂಕ್ ಗೆ ಪೆಟ್ರೋಲ್ ತರಲು ಮತ್ತೋರ್ವ ಸಹ ಸವಾರ ಧರ್ಮೇಂದ್ರ ಅವರೊಡನೆ ತೆರಳುವ ಸಂದರ್ಭ ಮಿನಿ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡರು.

ಗಾಯಳುಗಳಲ್ಲಿ ಸತೀಶ್‌ ಹಾಗೂ ಧರ್ಮೇಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Exit mobile version