Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿಗೆ 1.50 ಕೋಟಿ ಲಾಭ: ಜಿ. ವೆಂಕಟೇಶ ಶೆಣೈ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ಸಾಧನೆಯೊಂದಿಗೆ 785 ಕೋಟಿ ರೂ. ವ್ಯವಹಾರ ನಡೆಸಿದ್ದು, 1.50 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ತಿಳಿಸಿದ್ದಾರೆ.

ಬುಧವಾರ ಸಂಘದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರಿಯು ಒಟ್ಟು ಮೂರು ಶಾಖೆಗಳ ಮೂಲಕ 104 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಸಾಲ ಮತ್ತು ಮುಂಗಡ 89.44 ಕೋಟಿ ರೂ., ಪಾಲು ಬಂಡವಾಳ 2.76 ಕೋಟಿ ರೂ., ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ 30.93 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಮೀಸಲು ನಿಧಿ 6.55 ಕೋಟಿ ಮತ್ತು ಅನುತ್ಪಾದಕ ಸಾಲಗಳಿಗೆ 87.37 ಲಕ್ಷ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

1920 ರಲ್ಲಿ ಕಾರ್ಯಾರಂಭವಾದ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಎಲ್ಲ ಶಾಖೆಗಳು ಪ್ರಸ್ತುತ ಗಣಕೀಕೃತಗೊಂಡು ಕೋರ್ ಸಿಸ್ಟಂ ಸಾಫ್ಟ್‌ವೇರ್ ಅಳವಡಿಸಿದೆ. ಕಳೆದ ವರ್ಷ ಸದಸ್ಯರಿಗೆ ಶೇ.17 ಡಿವಿಡೆಂಡ್ ನೀಡಿದೆ. ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಹಕಾರಿಯು ಉತ್ತಮ ಸೌಹಾರ್ದ ಪ್ರಶಸ್ತಿಯನ್ನು ಪಡೆದಿದೆ ಎಂದು ಅವರು ಮಾಹಿತಿ ನೀಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಉಪಸ್ಥಿತರಿದ್ದರು.

Exit mobile version