Site icon Kundapra.com ಕುಂದಾಪ್ರ ಡಾಟ್ ಕಾಂ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಏ.12ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ
: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಲಲ್ಲಿ 2026-27 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ, ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಬೈಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ.

ಪ್ರವೇಶ ಪತ್ರಗಳನ್ನು ಆನ್‌ಲೈನ್ https://dom.karnataka.gov.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಜಿಲ್ಲಾ ಕಚೇರಿ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಹಾಗೂ ಸಂಬAಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2573596, 2574596, 08258-231101 ಮತ್ತು 08254-230370 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. 

Exit mobile version