ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಸಮೀಪದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ
ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಇನ್ನೋರ್ವ ಸಂದೀಪ ಗಾಣಿಗ ನೂಜಿ ಎಂಬಾತ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ.
ಐಪಿಎಲ್ ಕ್ರಿಕೆಟ್ ಪಂದ್ಯಾಟ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಬೆಟ್ಟಿಂಗ್ ಅಕ್ರಮ ದಂಧೆ ಯಲ್ಲಿ ತೊಡಗಿರುವ ಕುರಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದುಕೊಂಡರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

