ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವ್ಯಕ್ತಿತ್ವ ವಿಕಸಿನ ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಅವರು ಸಿದ್ದಾಪುರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವವನ್ನು ತುಂಬುತ್ತದೆ. ವಿದ್ಯಾರ್ಥಿಗಳು ಈ ಶಿಬಿರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ, ಸಿದ್ದಾಪುರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಂದ್ರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಕುಲಾಲ್, ಸಿದ್ದಾಪುರ ರಾಮದಾಸ ಪ್ರಭು, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಭೋಜ ಶೆಟ್ಟಿ, ಸಿದ್ದಾಪುರ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಚಂದ್ರ ಕುಲಾಲ್, ಸಿದ್ಧಾಪುರ ಸರಕಾರಿ ಪ್ರೌಢ ಶಾಲೆಯ ಎಸ್ .ಡಿ.ಎಮ್ ಸಿ ಅಧ್ಯಕ್ಷ ವಿಶ್ವನಾಥ ತುಂಬಿಕಲ್ಲಾಯ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಎಸ್.ಕೆ. ವಾಸುದೇವ ಪೈ, ಹಾಗೂ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎ ಎಸ್ ಉಪಸ್ಥಿತರಿದ್ದರು.
ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರ್ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ವತ್ಸಲಾ ವಂದಿಸಿದರು.