ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪಿ.ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿಯಲ್ಲಿ ಆರ್ಥಿಕ ಸಾಕ್ಷರತಾ ಶಿಕ್ಷಣ ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸಿನ ಮಹತ್ವ ಮತ್ತು ಸಮಾತೋಲನ ಆಹಾರ ಮತ್ತು ಆರೋಗ್ಯ ಎನ್ನುವ ವಿಷಯದ ಮಾಹಿತಿ ಕಾರ್ಯಾಗಾರ ಇತ್ತೀಚಿಗೆ ನಡೆಯಿತು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಸಹಕಾರಿ ವ್ಯವಸಾಯಕ ಬ್ಯಾಂಕ್ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಸಣ್ಣವರಿರುವಾಗಲೇ ಹಣಕಾಸಿನ ಮಹತ್ವ ಅರಿತು ಉಳಿತಾಯದ ಜ್ಞಾನ ಬೆಳೆಸಿ ಕೊಳ್ಳಿ ಎಂದರು.

ನಾವು ದಿನ ನಿತ್ಯ ಜೀವನದಲ್ಲಿ ಸಮತೋಲನ ಆಹಾರ ಸೇವಿಸಿ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪಲ್ಲವಿ ಮಾಹಿತಿ ನೀಡಿದರು.
ಚಿತ್ರಪಾಡಿ ಎಳೆ ಮಹಾಲಿಂಗೇಶ್ವರ ದೇವಸ್ಥಾನ ಮುಖ್ಯಸ್ಥ ವಿಶ್ವೇಶ್ವರ ತುಂಗ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರ ದೇವಾಡಿಗ ವಹಿಸಿದ್ದರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಮ್.ಜಿ.ಎಮ್. ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಲಕ್ಷ್ಮೀ ನಾರಾಯಣ ಕಾರಂತ್, ನಿವೃತ್ತ ಮುಖ್ಯೋಪಾಧ್ಯಾಯ ರಮೇಶ ನಕ್ಷತ್ರಿ, ಶಿಕ್ಷಕರಾದ, ಗಿರಿ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷ ನಾಗೇಂದ್ರ ಆಚಾರ್, ಮತ್ತು ಹಿರಿಯ ಶಿಕ್ಷಕಿ ಸುಮತಿ ಉಪಸ್ಥಿತರಿದ್ದರು.
ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯೋಪಾಧ್ಯಾರಾದ ಶಾಲಿನಿ ಸ್ವಾಗತಿಸಿದರು. ಶಿಕ್ಷಕಿ ಪಾರ್ವತಿ ವಂದಿಸಿದರು. ಶಿಕ್ಷಕಿಯರಾದ ಸುಧಾ ಮತ್ತು ಕುಸುಮ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಶಿಕ್ಷಕ ಶಿಕ್ಷಕಿಯರು ಸಹಕರಿಸಿದರು.