Kundapra.com ಕುಂದಾಪ್ರ ಡಾಟ್ ಕಾಂ

ಸಿಇಐಆರ್ ಪೋರ್ಟ್‌ಲ್‌ನಲ್ಲಿ ಪತ್ತೆ ಹಚ್ಚಲಾದ 241 ಮೊಬೈಲ್‌ ಪೋನ್‌ ವಾರಸುದಾರರಿಗೆ ಹಸ್ತಾಂತರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳೆದುಕೊಂಡ ಮೊಬೈಲ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಲಾದ ವಾರೀಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಸೋಮವಾರ ಜರಗಿತು.

ಮೊಬೈಲ್ ಕಳೆದುಕೊಂಡು ಸಿಇಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿದ್ದ ಮೊಬೈಲ್‌ಗಳ ಪೈಕಿ ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದು, ಆ ಮೊಬೈಲ್‌ಗಳನ್ನು ಜಿಲ್ಲೆಯ ಎಲ್ಲಾ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಮೂಲ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಹೀಗೆ ಜಿಲ್ಲೆಯಲ್ಲಿ ಒಟ್ಟು 241 ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

Exit mobile version