Site icon Kundapra.com ಕುಂದಾಪ್ರ ಡಾಟ್ ಕಾಂ

2023-24ರಲ್ಲಿ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಂಘದಲ್ಲಿ ವಂಚನೆ – ಸಿಇಓ, ಮ್ಯಾನೇಜರ್‌ ವಿರುದ್ಧ ಪ್ರಕರಣ ದಾಖಲು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಉಪ್ಪುಂದದ ಮೀನುಗಾರರ ಸಹಕಾರ ಸಂಘಕ್ಕೆ ಉದ್ಯೋಗಿಗಳೇ ವಂಚಿಸಿರುವ ಘಟನೆ ನಡೆದಿದೆ.

ಉಪ್ಪುಂದದಲ್ಲಿರುವ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ನಾವುಂದ ನಿವಾಸಿ ಸುಭಾಶ್ಚಂದ್ರ ಪೂಜಾರಿ (39) ಮತ್ತು ಪ್ರಧಾನ ವ್ಯವಸ್ಥಾಪಕರಾಗಿದ್ದ ಮರವಂತೆ ನಿವಾಸಿ ದೀಪಕ್ ಕುಮಾರ್ (35) ಅವರು ಸೇರಿಕೊಂಡು ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು 2023-2024ನೇ ಸಾಲಿನಲ್ಲಿ ಒಟ್ಟು 80,91,996/- ಮೊತ್ತದ ಹಣವನ್ನು ತಮ್ಮ ಸ್ವಂತಕ್ಕೆ ದುರುಪಯೋಗಪಡಿಸಿಕೊಂಡು ಸಂಘಕ್ಕೆ ಮೋಸ ಮಾಡಿ ವಂಚಿಸಿರುವುದು 2023- 2024 ರ ಸಾಲಿನ ಲೆಕ್ಕ ಪರಿಶೋಧನಾವರದಿಯಲ್ಲಿ ಸಂಘದ ಗಮನಕ್ಕೆ ಬಂದಿರುವುದಾಗಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು.

ಈ ಬಗ್ಗೆ ಮಾನ್ಯ ನ್ಯಾಯಾಲಯದ ಆದೇಶದಂತೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Exit mobile version