Site icon Kundapra.com ಕುಂದಾಪ್ರ ಡಾಟ್ ಕಾಂ

ಕಾರಂತ ಥೀಂ ಪಾರ್ಕ್‌ನಲ್ಲಿ 6ನೇ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಚೇತನ್ ನೈಲಾಡಿ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು ಕೋಟ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ಕಾರ್ಯ ನಿರತ ಪತ್ರಕರ್ತರ ಸಂಘ ಬ್ರಹ್ಮಾವರ ತಾಲೂಕು, ಕುಂದಾಪ್ರ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ಮಂಗಳೂರು, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್  ಇವರ ಆಶ್ರಯದಲ್ಲಿ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಮೇ.3ರಂದು ನಡೆಯುವ ಕಾಲಮಿತಿಯ 6ನೆಯ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಬ 2026ರ ಸಮ್ಮೇಳನ ಕಾರ್ಯಕ್ರಮ ಜರಗಲಿದೆ.

ಸಮ್ಮೇಳನಾಧ್ಯಕ್ಷರಾಗಿ ಕುಂದಾಪ್ರ ಕನ್ನಡದ ಪರಿವ್ರಾಜಕ ಚೇತನ್ ನೈಲಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಕುಂದಾಪ್ರ ಕನ್ನಡದ ಕಂಪನ್ನು ಪಸರಿಸಲು ಹಲವಾರು ಹೊಸ ಯೋಚನೆಗಳ ಕುರಿತು ಕೆಲಸ ಮಾಡುತ್ತ ಸಾಹಿತ್ಯ, ಮತ್ತು ದೃಶ್ಯ ಮಾಧ್ಯಮದ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಕಿರುಚಿತ್ರಗಳಲ್ಲಿ ಅಭಿನಯಿಸಿ ಕುಂದಾಪ್ರ ಕನ್ನಡಕ್ಕೆ ಒಂದು ಹೊಸ ದುಕ್ಕೆ ನೀಡಿರುವ ಚೇತನ್ ನೈಲಾಡಿಯವರನ್ನು ಆಯ್ಕೆ ಮಾಡಲಾಗಿದೆ.

ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಬ 2026ರ ಕಾರ್ಯಕ್ರಮಕ್ಕೆ ಹೆಚ್ಚಿನ ಕುಂದಾಪ್ರ ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಕುಂದರ್,  ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸಂಚಾಲಕರಾದ ಡಾ. ಅಣ್ಣಯ್ಯ ಕುಲಾಲ್, ರಾಜೇಶ್ ಅಚ್ಲಾಡಿ, ಸತೀಶ ವಡ್ಡರ್ಸೆ, ರವೀಂದ್ರ ಶೆಟ್ಟಿ ತಂತ್ರಾಡಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version