Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ಪವರ್ ಲಿಫ್ಟರ್‌ಗೆ ಅಶೋಕ್ ಗೆ ಸನ್ಮಾನ

ಗಂಗೊಳ್ಳಿ: ಇತ್ತೀಚಿಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಸಹಿತ ಅನೇಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪದಕ ವಿಜೇತ ಪವರ್ ಲಿಫ್ಟರ್, ಗಂಗೊಳ್ಳಿ ಕೆನರಾ ಬ್ಯಾಂಕಿನ ಉದ್ಯೋಗಿ ಜಿ.ವಿ. ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಗಂಗೊಳ್ಳಿಯ ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಬೈಲೂರು ರಾಮರಾವ್ ಶ್ಯಾನುಭಾಗ್ ರಂಗಮಂಟಪದಲ್ಲಿ ಇತ್ತೀಚಿಗೆ ಜರಗಿದ ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ೪೦ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಕುಂದಾಪುರದ ಪ್ರಸಿದ್ಧ ವಕೀಲ ರವಿಕಿರಣ್ ಮುರ್ಡೇಶ್ವರ ಅವರು ಸನ್ಮಾನಿಸಿ ಗೌರವಿಸಿದರು. ಕಲರ್ಸ್ ಕನ್ನಡವಾಹಿನಿಯ ಕಿರುತೆರೆ ನಟಿ ನೀತಾ ಅಶೋಕ್, ಸಂಘದ ಹಿರಿಯ ಸದಸ್ಯ ಎಚ್.ಗಣೇಶ ಕಾಮತ್, ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನಾ ಎಂ.ಪಡಿಯಾರ್, ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಕಾರ್ಯದರ್ಶಿ ನಾಗರಾಜ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

Exit mobile version