Site icon Kundapra.com ಕುಂದಾಪ್ರ ಡಾಟ್ ಕಾಂ

ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ: ಕೃಷ್ಣ ಪೂಜಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ವಿದ್ಯಾರ್ಥಿಗಳು ಸೃಜನಶೀಲ ಚಿಂತನೆಗಳನ್ನು ಹೊಂದಿರಬೇಕು. ಪರಿಸರದ ಬಗ್ಗೆ ಕಾಳಜಿ ವಹಿಸಿ, ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪಾಠೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಉತ್ತಮವಾಗುತ್ತದೆ. ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಹೇಳಿದರು.

ಅವರು ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಎಟಿಎಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ಹಮ್ಮಿಕೊಂಡ ನಾಲ್ಕು ದಿನಗಳ ’ಎಟಿಎಲ್ ಬೇಸಿಗೆ ಶಿಬಿರ’ವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಎನ್. ಸದಾಶಿವ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸ.ವಿ. ಆಂಗ್ಲ ಮಾಧ್ಯಮ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತಾ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಸಂಪನ್ಮೂಲ ವ್ಯಕ್ತಿ ನಿಶ್ಮಿತಾ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಜಯಶ್ರೀ ನಾಯಕ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಭಾಗ್ಯಶ್ರೀ ವಂದಿಸಿದರು.

Exit mobile version