Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ದೈಹಿಕ ಆರೋಗ್ಯಕ್ಕೆ ಮಾನಸಿಕ ಸ್ವಾಸ್ತ್ಯ ಅಗತ್ಯ. ಒಳ್ಳೆಯ ಆರೋಗ್ಯಕ್ಕೆ ಸಂತೋಲನ ಆಹಾರ, ಪೌಷ್ಟಿಕ ಆಹಾರ, ಸಕ್ಕರೆಯ ಮಿತವಾದ ಬಳಕೆ ಅತ್ಯಂತ ಅವಶ್ಯಕ. ವಿದ್ಯಾರ್ಥಿ ದೆಸೆಯಲ್ಲಿಯೇ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಸಮುದಾಯ ಆರೋಗ್ಯ ಕೇಂದ್ರ, ಕೋಟ ಇಲ್ಲಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಶಿಶು ತಜ್ಞರಾದ ಡಾ. ಮಾಧವ ಪೈ ಕೆ. ತಿಳಿಸಿದರು.

ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ 1 ಮತ್ತು 2ರ ಆಶ್ರಯದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.

ಸುಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಪಲ್ಲವಿ ಪ್ರಾರ್ಥಿಸಿ, ನಿಶಾ ಶೆಟ್ಟಿ ಸ್ವಾಗತಿಸಿ, ಎನ್.ಎಸ್.ಎಸ್. ಸ್ವಯಂಸೇವಕರರಾದ ಶ್ರೇಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದ, ದೀಪಿಕಾ ಶೆಟ್ಟಿ ವಂದಿಸಿದರು.

Exit mobile version