ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ ಹಾಗೂ ಶಾಲೆಯನ್ನು ಜ್ಞಾನನಿಧಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸುವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಸ್ವಯಂ ಸ್ಫೂರ್ತಿ ಫೌಂಡೇಶನ್ ಸಹಕಾರದೊಂದಿಗೆ ಟೊರೆಂಟೋ ಟೆಕ್ನಾಲಾಜಿಸ್ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್‌ಆರ್ ನಿಧಿಯಿಂದ ಈ ಕೌಶಲ್ಯ ಕೇಂದ್ರ ಸ್ಥಾಪಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಸ್ವಯಂ ಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ್ ಶೆಟ್ಟಿ ಜಡ್ಕಲ್ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ಒತ್ತಿಹೇಳಿದರು.
ಈ ಸಂದರ್ಭದಲ್ಲಿ ಜ್ಞಾನನಿಧಿ ಟ್ರಸ್ಟ್ ಶಾಲೆಯನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ವಿದ್ಯಾರ್ಥಿ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

