Site icon Kundapra.com ಕುಂದಾಪ್ರ ಡಾಟ್ ಕಾಂ

ಶಂಕನಾರಾಯಣ: ಮದರ್ ತೆರೇಸಾ ಪಿಯು ಕಾಲೇಜಿಗೆ ಶೇ.100 ಫಲಿತಾಂಶ. ಹಲವು ರ್‍ಯಾಂಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಇಲ್ಲಿನ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಈ ವರ್ಷದ ಪದವಿ ಪೂರ್ವ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಒಟ್ಟು 175 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಸಂಜನಾ 595 ಅಂಕಗಳನ್ನು ಪಡೆದು 99.16% ಫಲಿತಾಂಶದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನವನ್ನು ತಂದುಕೊಟ್ಟಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಅಮೂಲ್ಯ ಕೂಡ 595 ಅಂಕಗಳನ್ನು ಗಳಿಸಿ 99.16% ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆಡಿದ್ದಾರೆ. ಇವರ ಸಾಧನೆ ಕಾಲೇಜಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದೆ.

ವಿದ್ಯಾರ್ಥಿಗಳ ಈ ಉಜ್ವಲ ಸಾಧನೆಗೆ ಉಪನ್ಯಾಸಕರ ಪರಿಶ್ರಮ, ಸಮರ್ಪಿತ ಬೋಧನೆ ಹಾಗೂ ಸಮಗ್ರ ಮಾರ್ಗದರ್ಶನವೇ ಪ್ರಮುಖ ಕಾರಣವಾಗಿದ್ದು, ಸಂಸ್ಥೆಯ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Exit mobile version